ಬೆಂಗಳೂರು,ಡಿಸೆಂಬರ್,4,2025 (www.justkannada.in): ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದರು.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬಾರದು. ಬದಲಾಗಿ ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಬೇಕು. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ 50%ಗೂ ಹೆಚ್ಚು ಜನ ಮಹಿಳೆಯರಿದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. “ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ ಎಂದು ಡಿಕೆ ಶಿವಕುಮಾರ್ ನುಡಿದರು.
ಮಹಿಳೆಯರಿಗೆ ಎಲ್ಲಾ ಶಕ್ತಿ ಇದೆ. ಮಹಿಳೆಯರು ಪುರುಷರಿಗಿಂತ ಹೆಚ್ಚ ಶಿಸ್ತಿನಿಂದಿದ್ದಾರೆ. ಅದ್ದರಿಂದಲೇ ಮಹಿಳಾ ಸಂಘ ಮಾಡಲು ಪ್ರೋತ್ಸಹ ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: organize, basis, women’s power, DCM, DK Shivakumar







