ವಾಣಿಜ್ಯ ತೆರಿಗೆ ಇಲಾಖೆಗೆ  ರೂ. 1,20,000 ಕೋಟಿ  ರೂ. ಸಂಗ್ರಹದ ಗುರಿ ನಿಗಧಿ : ಸಿಎಂ ಸಿದ್ದರಾಮಯ್ಯ

Commercial Tax Department sets Rs. 1,20,000 crore collection targets: CM Siddaramaiah A target of Rs. 80 thousand crores have been set till the end of November. In this, the net collection is Rs. 72131 crores, with a performance percentage of 90 percent. In this, GST is Rs. 53,522 crores, KST is Rs. 17,595 crore and Income Tax is Rs. 1014 crore.

 

ಬೆಂಗಳೂರು, ಡಿ.೧೨,೨೦೨೫ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತೆರಿಗೆ ಸಂಗ್ರಹ ಇಲಾಖೆಗಳ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಭೆಯಲ್ಲಿನ ಪ್ರಮುಖ ಅಂಶಗಳು…

ವಾಣಿಜ್ಯ ತೆರಿಗೆ:

ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ.

ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ. 72131  ಕೋಟಿ ಮಾಡಲಾಗಿದ್ದು, ಸಾಧನೆ ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್ಟಿ ರೂ. 53,522 ಕೋಟಿ, ಕೆಎಸ್ಟಿ ರೂ. 17,595 ಕೋಟಿ ಮತ್ತು ವೃತಿ ತೆರಿಗೆ1014 ಕೋಟಿ ಸಂಗ್ರಹಿಸಲಾಗಿದೆ.

ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರವನ್ನು ಸಾಧ್ಯವಾಗಿದೆ.

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು.  ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು.

ಬೋಗಸ್ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಸೂಚನೆ ನೀಡಿದರು.

ಅಬಕಾರಿ ತೆರಿಗೆ :

2025-26 ನೇ ಹಣಕಾಸು ಸಾಲಿನಲ್ಲಿ ರೂ. 43ಸಾವಿರ ಕೋಟಿ ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್ವರೆಗೆ ರೂ.26,215 ಅಂತ್ಯದವರೆಗೆ ರೂ. ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ.

ನಿಗದಿತ ಗುರಿಯನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

key words: Commercial Tax Department, Rs. 1,20,000 crore, collection targets, CM Siddaramaiah

SUMMARY:

Commercial Tax Department sets Rs. 1,20,000 crore collection targets: CM Siddaramaiah

A target of Rs. 80 thousand crores have been set till the end of November. In this, the net collection is Rs. 72131 crores, with a performance percentage of 90 percent. In this, GST is Rs. 53,522 crores, KST is Rs. 17,595 crore and Income Tax is Rs. 1014 crore.