ಬಿಜೆಪಿ ಜೊತೆ ಸೇರಿ ಹೆಚ್ ಡಿಕೆ ಮನುವಾದಿಗಳಾಗಿದ್ದಾರೆ – ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು, ಡಿಸೆಂಬರ್ 06,2025 (www.justkannada.in):  ಭಗವದ್ಗೀತೆಯನ್ನು ವಿದ್ಯಾರ್ಥಿಗಳ ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನು ವಾದಿ ಆಗಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುತ್ತಿದೆ.

ಸಂವಿಧಾನ ಪ್ರತಿಯೊಬ್ಬರಿಗೂ ಅರಿವಿಗೆ ಬರಬೇಕು. ಅದರಲ್ಲಿಯೂ ಮಕ್ಕಳಿಗೆ ತಮ್ಮ ಹಕ್ಕುಗಳೇನು, ಬಾಧ್ಯತೆಗಳೇನು ಎನ್ನುವುದು ಅರ್ಥ ಆಗಬೇಕು. ಇದರಿಂದಲೇ ಮಕ್ಕಳ ಪಠ್ಯದಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸಿದ್ದೇವೆ ಎಂದು ತಿರುಗೇಟು ನೀಡಿದರು.

Key words: HDK, BJP, Manuvadi , CM Siddaramaiah