ಬೆಳಗಾವಿ,ಡಿಸೆಂಬರ್,12,2025 (www.justkannada.in): ಬೆಳಗಾವಿ ಅಧಿವೇಶನದ ನಡುವೆಯೇ ಕಾಂಗ್ರೆಸ್ ನಾಯಕರಿಂದ ಪದೇ ಪದೇ ಡಿನ್ನರ್ ಪಾರ್ಟಿ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ನೀವಿಲ್ಲಿ ಅಧಿವೇಶನಕ್ಕೆ ಬಂದಿದ್ದೀರೋ ಅಥವಾ ಡಿನ್ನರ್ ಪಾರ್ಟಿಗೆ ಬಂದಿದ್ದೀರೋ? ‘ಕಾಂಗ್ರೆಸ್ ನಾಯಕರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಇಲ್ಲಿಯೂ ಡಿನ್ನರ್ ಪಾರ್ಟಿ ಮುಂದುವರಿಸಿರುವುದು ನಾಡಿನ ಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಹರಿಹಾಯ್ದರು.
‘ಕಳೆದ ನಾಲ್ಕು ತಿಂಗಳಿನಿಂದ ಪದೇ ಪದೇ ಡಿನ್ನರ್ ಪಾರ್ಟಿ ಮೀಟಿಂಗ್ ಮಾಡಿಕೊಂಡು ಬಂದಿದ್ದಾರೆ. ಇದೇ ಕಾರಣದಿಂದ ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ ಹೋಯಿತು. ರಾಜ್ಯದ ಜನರ ಸಮಸ್ಯೆಗಳ ಕುರಿತು ಚಿಂತನೆ ಮಾಡಲು ಈ ಸರ್ಕಾರ ಸಮಯ ನೀಡಲಿಲ್ಲ. ಡಿನ್ನರ್, ಲಂಚ್ ಮೀಟಿಂಗ್ ನಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಾರೆ ಅಂದರೆ ಅದೂ ಇಲ್ಲ. ಕೇವಲ ತಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ಮಾಡುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
Key words: Belgaum session, Dinner party, congress, BY Vijayendra







