ಬೆಂಗಳೂರು, ಡಿಸೆಂಬರ್ 12,2025 (www.justkannada.in): ಸಾಕಿದ್ದ ಗಿಳಿಯನ್ನು ರಕ್ಷಿಸಲು ಹೋದ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್ ನಲ್ಲಿ ಈ ದುರಂತ ನಡೆದಿದೆ. ಅರುಣ್ ಕುಮಾರ್ (32) ಕರೆಂಟ್ ಶಾಕ್ ನಿಂದ ಮೃತಪಟ್ಟ ಯುವಕ. ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿದ್ದ ಸುಮಾರು 2 ಲಕ್ಷ ರೂ ಬೆಲೆ ಬಾಳುವ ಫಾರಿನ್ ಗಿಳಿಯನ್ನು ರಕ್ಷಿಸಲು ಹೋಗಿ ಈ ದುರ್ಘಟನೆ ನಡೆದಿದೆ.
ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್ ಒಳಭಾಗದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಗಿಳಿ ಕುಳಿತಿತ್ತು. ಇದನ್ನು ನೋಡಿದ ಅರುಣ್ ಕುಮಾರ್ ಗಿಳಿಯನ್ನು ರಕ್ಷಿಸಲು ಅಪಾರ್ಟ್‌ಮೆಂಟ್ ಕಾಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್ ಗೆ ಕಟ್ಟಿಗೆ ಸೇರಿಸಿ ಅದನ್ನು ಓಡಿಸಲು ಮುಂದಾಗಿದ್ದಾರೆ.
ಈ ವೇಳೆ ವಿದ್ಯುತ್ ಶಾಕ್ ಹೊಡೆದು ಅರುಣ್ ಕುಮಾರ್ ಕಾಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು ಆದರೆ ಅರುಣ್ ಮೃತಪಟ್ಟಿದ್ದಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: young man, death, rescue, parrot met, Bangalore







