ಬೆಂಗಳೂರು, ಡಿಸೆಂಬರ್ 15,2025 (www.justkannada.in): ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ, ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ? ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ. ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಯಲಾಗಲಿದೆ ಎಂದು ತಿಳಿಸಿದ್ದಾರೆ.
ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ. ಕೋವಿಡ್ ಸಮಯದಲ್ಲಿ ಜನರ ಸಂಕಷ್ಟ ಕೇಳದೇ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದರು.
Key words: Crop, Insurance Scheme, Central government, Minister, Ishwar Khandre







