ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಶಾಮನೂರು ಶಿವಶಂಕರಪ್ಪ ಜನರ ಹೃದಯದಲ್ಲಿ ನೆಲೆಸಿದ್ದಾರೆ-ಸಚಿವ ಈಶ್ವರ ಖಂಡ್ರೆ

ದಾವಣಗೆರೆ,ಡಿಸೆಂಬರ್,15,2025 (www.justkannada.in):  ದಾವಣಗೆರೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಶಾಮನೂರು ಶಿವಶಂಕರಪ್ಪ ಅವರು ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ನುಡಿದರು.

ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಮಾತನಾಡಿದ  ಸಚಿವ ಈಶ್ವರ್ ಖಂಡ್ರೆ ಅವರು,  ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಶಾಮನೂರು ಶಿವಶಂಕರಪ್ಪ  ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ದಶಕಕ್ಕೂ ಹೆಚ್ಚುಕಾಲ ಅವರು ಸೇವೆ ಸಲ್ಲಿಸಿರುವುದು ಅನುಪಮವಾದ್ದು ಎಂದರು.

ದಾವಣಗೆರೆ ತಾಲೂಕನ್ನು ಜಿಲ್ಲೆಯಾಗಿ ಮಾಡುವಲ್ಲಿ ಅವರ ಕೊಡುಗೆ ಅಪಾರವಾಗಿದೆ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು. ನೇರ ನಿಷ್ಟುರ ವಾದಿಯಾಗಿದ್ದ ಅವರ ಆಗಲಿಕೆಯಿಂದ ರಾಷ್ಟ್ರ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Key words: Shamanur Shivashankarappa, Minister,  Eshwar Khandre