Sunday, August 2, 2026

BDA Apartments

Home Front Page ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನವದೆಹಲಿ,ಡಿಸೆಂಬರ್,16,2025 (www.justkannada.in):  ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಚಾರ್ಜ್ ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಹಾಗೆಯೇ ಇಡಿ ಅಧಿಕಾರಿಗಳು ತನಿಖೆ ಮುಂದುವರೆಸಲು ಕೋರ್ಟ್ ಅನುಮತಿ ನೀಡಿದೆ.

ಇಡಿ ಸಲ್ಲಿಸಿದ ಚಾರ್ಜ್ ಶೀಟ್ ಪರಿಗಣಿಸಲ್ಲ. ಖಾಸಗಿ ವ್ಯಕ್ತಿ ದೂರು ನೀಡಿದ್ದಾರೆ ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗಾನೆ ತಿಳಿಸಿದ್ದು, ಈ ಮೂಲಕ  ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ರಿಲೀಫ್ ಸಿಕ್ಕಿದೆ.

Key words: National Herald case, Sonia Gandhi, Rahul Gandhi, court