ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ  ಐಟಿ ದಾಳಿ, ಪರಿಶೀಲನೆ

ಬೆಂಗಳೂರು ,ಡಿಸೆಂಬರ್,17,2025 (www.justkannada.in):  ಬೆಂಗಳೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಇರುವ ನಟಿ ಶಿಲ್ಪಾಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಪಬ್ ಬೆಂಗಳೂರಿನ ಅತಿ ದುಬಾರಿ ಪಬ್ ಆಗಿದ್ದು, ಪಬ್ ಗೆ ಸಂಬಂಧಿಸಿದಂತೆ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

Key words: IT raids, actress, Shilpa Shetty, pub, owned