ಬೆಳಗಾವಿ,ಡಿಸೆಂಬರ್,19,2025 (www.justkannada.in): ಕೇಂದ್ರ ಸರ್ಕಾರದಿಂದ ಮನರೇಗಾ ಯೋಜನೆಯ ಹೆಸರು ಬದಲಾವಣೆ ವಿಚಾರ ಸಂಬಂಧ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಎಂಎಲ್ ಸಿ ಬಿ.ಕೆ ಹರಿಪ್ರಸಾದ್, ಡಿಸೆಂಬರ್ 27 ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಇದೆ. ಮನೆರೇಗಾ ಯೋಜನೆ ಹೆಸರು ಮಾರ್ಪಾಡು ಮಾಡಿರುವ ಬಗ್ಗೆ ಸಭೆ ಕರೆದಿದ್ದಾರೆ. ಜೊತೆಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಬಗ್ಗೆಯೂ ಚರ್ಚೆಯಾಗುತ್ತೆ. ನಾನು ನಾಸೀರ್ ಹುಸನ್ ಸೇರಿ 4ಜನ ಭಾಗಿಯಾಗುತ್ತೇವೆ. ಸಿಡಬ್ಲ್ಯುಸಿ ಸಭೆಯಲ್ಲಿ ರಾಷ್ಟ್ರ ರಾಜಕಾರಣ ಕುರಿತು ಚರ್ಚೆಯಾಗಲಿದೆ ಎಂದರು.
ಸಿಎಂ ಮತ್ತು ಡಿಸಿಎಂರಿಂದ ಹೈಕಮಾಂಡ್ ನಾಯಕರ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿ.ಕೆ ಹರಿಪ್ರಸಾದ್, ಡಿಕೆ ಶಿವಕುಮಾರ್ ಸೇರಿ ಯಾರೇ ಹೈಕಮಾಂಡ್ ನಾಯಕರನ್ನ ಭೇಟಿಯಾಗಬಹದು, ಚರ್ಚೆ ಮಾಡಬಹುದು. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
Key words: MNREGA scheme, name change, CWC, meeting, B.K. Hariprasad







