ಕೊಚ್ಚಿ,ಡಿಸೆಂಬರ್,20,2025 (www.justkannada.in): ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ನಿಧನರಾಗಿದ್ದು, ಅವರಿಗೆ 69 ವರ್ಷ ವಯಸ್ಸಾಗಿತ್ತು.
ಹಲವು ವರ್ಷಗಳಿಂದ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಕೇರಳದ ಉದಯಂಪೆರೂರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. ಇತ್ತೀಚೆಗೆ ಅವರನ್ನು ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು. ಶ್ರೀನಿವಾಸನ್ ನಟನಾಗಿ, ಸಿನಿಮಾ ಬರಹಗಾರನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕೇರಳದ ಕಣ್ಣೂರ್ ಜಿಲ್ಲೆಯಲ್ಲಿ 1956ರ ಏಪ್ರಿಲ್ 6ರಂದು ಶ್ರೀನಿವಾಸನ್ ಜನಿಸಿದ್ದರು.
ಶ್ರೀನಿವಾಸನ್ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ, 1976 ರಲ್ಲಿ ಮಣಿಮುಳಕ್ಕಂ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದರು.
Key words: Malayalam, actor, director, Srinivasan, passes away







