ಜ.2 ರಿಂದ 90 ದಿನಗಳ ಕಾಲ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ಇತ್ಯರ್ಥ ಅಭಿಯಾನ

ಮೈಸೂರು,ಡಿಸೆಂಬರ್,20,2025 (www.justkannada.in): ರಾಷ್ಟ್ರಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಅವರ ನಿರ್ದೇಶನದಂತೆ ರಾಜ್ಯಾದ್ಯಂತ ದಿನಾಂಕ 02-01-2026 ರಿಂದ 90 ದಿನಗಳವರೆಗೆ “ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನ – ಮಧ್ಯಸ್ಥಿಕೆ 90 ದಿನಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಂತೆಯೇ  ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳು ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.  ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮುಗಳು, ಭೂ ಸ್ವಾಧೀನ ಪ್ರಕರಣಗಳ, ಚೆಕ್ಕು ಅಮಾನ್ಯದ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ/ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನೆ ಯನ್ನು ಹೊರತುಪಡಿಸಿ), ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು.

ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂದವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದಿಗೆ ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು (ಮೈಸೂರು ನಗರಕ್ಕೆ ಸಂಬoಧಿದಂತೆ ಮಾತ್ರ) ಟೋಲ್ ಫ್ರೀ ಸಂಖ್ಯೆ. 15100 ಹಾಗೂ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: resolve, cases, through mediation, Campaign, 90 days, Mysore