ಕಲಬುರಗಿ,ಡಿಸೆಂಬರ್,22,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗಲಿದೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಅಹಿಂದ ಸಮುದಾಯದ 10 ರಿಂದ 15 ಮಠಾಧೀಶರು ದೆಹಲಿಗೆ ಹೋಗುತ್ತೇವೆ. ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇವೆ. ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡದಿದ್ರೆ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬೀಳುತ್ತೆ ಎಂದರು.
ದೆಹಲಿಗೆ ನಿಯೋಗ ತೆರಳಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡುತ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಸರ್ವನಾಶ ಆಗುತ್ತೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದರು.
Key words: Congress party, DK Shivakumar, CM, Pranavananda Swamiji







