ಕಲಬುರಗಿ,ಡಿಸೆಂಬರ್,23,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಅಧಿಕಾರ ಹಂಚಿಕೆ ಒಪ್ಪಂದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅಂತಾರೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಗೊಂದಲ ಬಗೆಹರಿಸಿಕೊಳ್ಳಿ ಅಂತಾರೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ನಿರ್ಧಾರ ಎನ್ನುತ್ತಾರೆ. ಇನ್ನು ರಾಹುಲ್ ಗೆ ಟೈಮಿಲ್ಲ ದೇಶವಿರೋಧಿ ಕೆಲಸದಲ್ಲಿ ಬ್ಯುಸಿ ಎಂದು ವ್ಯಂಗ್ಯವಾಡಿದರು.
Key words: Congress, high command, Union Minister, Shobha Karandlaje







