ಕುರ್ಚಿ ಕಿತ್ತಾಟ: ಸರ್ಕಾರ ಸಂಪೂರ್ಣ ನಿಷ್ಕ್ರಿಯ, ರಾಜ್ಯದ ಅಭಿವೃದ್ದಿ ಕುಂಠಿತ- ಮಾಜಿ ಸಿಎಂ ಬೊಮ್ಮಾಯಿ ಟೀಕೆ

ಕಲಬುರಗಿ,ಡಿಸೆಂಬರ್,23,2025 (www.justkannada.in): ರಾಜ್ಯದಲ್ಲಿ , 24 ಗಂಟೆಯೂ ಸಿಎಂ ಸ್ಥಾನದ ಬಗ್ಗೆ ಕಿತ್ತಾಟ ನಡೆಯುತ್ತಿದ್ದು ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯಗೊಂಡಿದೆ.  ರಾಜ್ಯದ ಅಭಿವೃದ್ದಿ ಕುಂಠಿತವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿಎಂ ಸ್ಥಾನದ ಖುರ್ಚಿ ಉಳಿಸಿಕೊಳ್ಳುವಲ್ಲಿ ಸಿದ್ದರಾಮಯ್ಯ ಹಾಗೂ ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ ಸಿಎಂ ಸ್ಥಾನ ಪಡೆಯುವ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ. ಇದರಿಂದಾಗಿ  ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ.‌ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್  ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ದ್ವೇಷ ಭಾಷಣ ಕಾಯ್ದೆ ಕುರಿತು ಪ್ರತಿಕ್ರಿಯಿಸಿದ  ಬಸವರಾಹ ಬೊಮ್ಮಾಯಿ, ದ್ವೇಷ ಭಾಷಣ ಕಾಯ್ದೆ ಒಂದು ದಮನಕಾರಿ ಕಾನೂನು. ಯಾರನ್ನು ಯಾವಾಗ ಬೇಕಾದರೂ ಒಳಗೆ ಹಾಕುವ‌ ರೀತಿ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಶೂನ್ಯವಾಗಿದೆ. ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು ಯಾರೂ ಇದನ್ನು ಪ್ರಶ್ನೆ ಮಾಡಬಾರದೆಂದು ಈ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು.

Key words: government, inactive, former CM, Bommai, criticizes