ಬೆಂಗಳೂರು,ಡಿಸೆಂಬರ್,24,2025 (www.justkannada.in): ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿದ್ದು ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮತ್ತು ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಮೆಟ್ಟಿಲೇರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದ್ದು ವಿಜಯಲಕ್ಷ್ಮೀ ಅವರು ಬೆಂಗಳೂರು ನಗರ ಪೊಲಿಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಕೆಟ್ಟ ಮೆಸೇಜ್ ಕಮೆಂಟ್ ಗಳನ್ನ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಹಲವು ಇನ್ ಸ್ಟಾ ಐಡಿಗಳ ವಿರುದ್ದ ವಿಜಯಲಕ್ಷ್ಮಿ ದೂರು ನೀಡಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.
Key words: Obscene message, actor, Darshan, wife, Vijayalakshmi, complains







