ಬೆಂಗಳೂರು,ಡಿಸೆಂಬರ್,24,2025 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿ ಹೆಚ್ಚಳ ಎಂಬ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಹಳ ವರ್ಷಗಳಿಂದ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಕೆಲಸ ನಡೆಯುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಮಾತ್ರ ಹೊರಗುತ್ತಿಗೆ ಇಲ್ಲ. ಸರ್ಕಾರದ ಬೇರೆ ಬೇರೆ ಇಲಾಖೆಗಳಲ್ಲೂ ಹೊರಗುತ್ತಿಗೆ ಸಿಬ್ಬಂದಿ ಇದ್ದಾರೆ ಎಂದರು.
220 ವೈದ್ಯರ ನೇರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಿದ್ದೇವೆ. ತಾಂತ್ರಿಕ ಪರಿಣಿತರು ನರ್ಸ್ ಗಳ ನೇಮಕಾತಿಗೂ ಒಪ್ಪಿಗೆ ಸಿಕ್ಕಿದೆ. 1320 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದೇವೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಯತ್ನ ಮಾಡುತ್ತೇವೆ. ಆದರೆ ಆರೋಗ್ಯ ಸೇವೆ ವ್ಯವಸ್ಥೆಗೆ ಎಲ್ಲಿಯೋ ತೊಂದರೆ ಆಗಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
Key words: process, direct recruitment, 220 doctors, Minister, Dinesh Gundu Rao







