ಬೆಂಗಳೂರು,ಡಿಸೆಂಬರ್,25,2025 (www.justkannada.in): ರಾಜ್ಯದಲ್ಲಿ ಸಿಎಂ ಕುರ್ಚಿ ಗೊಂದಲ, ನಾಯಕತ್ವ ಬದಲಾವಣೆ ಕುರಿತು ಚರ್ಚೆಯಾಗುತ್ತಿದ್ದು ಸಿಎಂ ಸಿದ್ದರಾಮಯ್ಯ ಪರ ಮುಖಂಡರು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ತಮ್ಮ ನಾಯಕನ ಪರ ಹೇಳಿಕೆ ನೀಡುತ್ತಲೇ ಇದ್ದಾರೆ. ಈ ಮಧ್ಯೆ ಇದೀಗ ಮಾಜಿ ಸಂಸದ ಡಿ.ಕೆ ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಮಾರ್ಮಿಕ ಪೋಸ್ಟ್ ವೊಂದನ್ನು ಹಾಕಿದ್ದು ವೈರಲ್ ಆಗಿದೆ.
ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಂಸದ ಡಿ.ಕೆ ಸುರೇಶ್ ಅವರು, ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು ಎಂದು ಪಾಟೀಲ್ ಪುಟ್ಟಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ.
ಇದೀಗ ಡಿಕೆ ಸುರೇಶ್ ಅವರ ಪೋಸ್ಟ್ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.
Key words: Former MP, DK Suresh, post







