ಅಪಘಾತದಲ್ಲಿ ನಾಲ್ವರು ಯುವಕರ ಸಾವು : 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ, ಡಿಸೆಂಬರ್,26,2025 (www.justkannada.in):  ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ  5 ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಇದೀಗ ಸೂಚನೆ ನೀಡಿದ್ದಾರೆ.

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ  ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿತ್ತು. ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್  ಎಂಬುವವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಘಟನೆ ಸಂಬಂಧ ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದರು ಎನ್ನಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ  ಮೃತರಿಗೆ 5 ಲಕ್ಷ ರೂ. ಪರಿಹಾರ  ಪರಿಹಾರ ವಿತರಣೆಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Key words: Four youths, die , accident, CM Siddaramaiah, compensation