ಕಾಂಗ್ರೆಸ್ ಪಕ್ಷ ಮತ್ತೆ ಇಬ್ಭಾಗವಾಗಲಿದೆ- ಸಂಸದ ಕಾರಜೋಳ ಭವಿಷ್ಯ

ಚಿತ್ರದುರ್ಗ,ಡಿಸೆಂಬರ್,26,2025 (www.justkannada.in): ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ,  ಈ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ದಿ ನಿಷ್ಕ್ರೀಯವಾಗಿದೆ.  ಇಂದಿರಾ ಗಾಂಧಿ, ದೇವರಾಜ ಅರಸು, ಬಂಗಾರಪ್ಪ ಕಾಲದಲ್ಲಿ ಕಾಂಗ್ರೆಸ್ ಇಬ್ಭಾಗವಾಗಿತ್ತು.  ಈಗ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಇಬ್ಬಾಗವಾಗಲಿದೆ ಎಂದರು.

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.

Key words: Congress, party, MP, Govinda Karjola, prediction