ಮತ್ಸ್ಯ ಸಂಪದ ಯೋಜನೆ:  ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ, ಡಿಸೆಂಬರ್,26 (www.justkannada.in):  ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಶೈತ್ಯಗಾರ/ಮಂಜುಗಡ್ಡೆ ಘಟಕ ( ಕನಿಷ್ಠ 10 ಟನ್ ಸಂಗ್ರಹ ಸಾಮರ್ಥ್ಯ) ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 40 ರಷ್ಟು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು 2026 ರ ಜನವರಿ 09 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಛೇರಿ ಹಾಗೂ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಮೊಬೈಲ್ ಸಂಖ್ಯೆ 9880609384, 080-25634468 ಅನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Fish Wealth Scheme, Apply, subsidy