ಬೆಂಗಳೂರು, ಡಿಸೆಂಬರ್,27,2025 (www.justkannada.in): ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ (26) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಗಾನವಿಯ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಗೆಯೇ ಗಾನವಿಯ ಅತ್ತೆ ಸಹ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ.
ಹೌದು ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸೂರಜ್ ಮತ್ತು ಗಾನವಿ ಎರಡು ತಿಂಗಳ ಹಿಂದಷ್ಟೆ ಮದುವೆಯಾಗಿ ಹನಿಮೂನ್ ಗೆ ಶ್ರೀಲಂಕಾಗೆ ತೆರಳಿದ್ದರು. ಆದರೆ ಅಲ್ಲಿ ದಂಪತಿ ನಡುವೆ ಕಲಹಗಳು ಏರ್ಪಟ್ಟಿತ್ತು. ಹನಿಮೂನ್ ಮಧ್ಯದಲ್ಲೇ ಮೊಟಕುಗೊಳಿಸಿ ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಶ್ರೀಲಂಕಾದಿಂದ ವಾಪಸ್ ಆದ ಬಳಿಕ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.
ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮಹಾರಾಷ್ಟ್ರದಲ್ಲಿ ಪತಿ ಸೂರಜ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದೆ ಗಾನವಿಯ ಸಾವಿನ ಬಳಿಕ ಸೂರಜ್ ತಾಯಿ ಜಯಂತಿ ಹಾಗೂ ಸಹೋದರ ಸಂಜಯ್ ಜೊತೆ ನಾಗಪುರಕ್ಕೆ ತೆರಳಿದ್ದರು. ಪತ್ನಿಯ ಆತ್ಮಹತ್ಯೆಯ ವಿಚಾರದಲ್ಲಿ ಆಕೆಯ ಪೋಷಕರು ಹಾಗೂ ಸಂಬಂಧಿಕರ ಆಕ್ರೋಶ ಮತ್ತು ಅವರಿಂದಾದ ಅವಮಾನ ತಡೆಯಲಾಗದೆ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದ್ದು ಆತನ ತಾಯಿ ಆತ್ಮಹತ್ಯೆಗೆ ಯತ್ನಿಸಿ ನಾಗಾಪುರದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
Key words: Wife, suicide case, Husband, also, commits, suicide







