ಉನ್ನಾವೋ ಅತ್ಯಾಚಾರ ಕೇಸ್ : ಆರೋಪಿ ಕುಲದೀಪ್ ಸಿಂಗ್ ಸೆಂಗರ್‌ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ,ಡಿಸೆಂಬರ್,29,2025 (www.justkannada.in): ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

2019 ರ ಡಿಸೆಂಬರ್‌ನಲ್ಲಿ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ 25 ಲಕ್ಷ ರೂ. ದಂಡವನ್ನೂ ವಿಧಿಸಿತ್ತು.

ಈ ಮಧ್ಯೆ  ಡಿಸೆಂಬರ್ 23 ರಂದು ದೆಹಲಿ ಹೈಕೋರ್ಟ್ ಅವರ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು. ದೆಹಲಿ ಹೈಕೋರ್ಟ್ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಸಿಬಿಐ  ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿತ್ತು.

ಉತ್ತರ ಪ್ರದೇಶ ಉನ್ನಾವೋ ಅತ್ಯಾಚಾರ ಪ್ರಕರಣ ಗಂಭೀರವಾದದು. ಹೀಗಾಗಿ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಜಾಮೀನು ನೀಡಬಾರದು. ಸೆಂಗಾರ್ ಬಿಡುಗಡೆ ಮಾಡದಂತೆ ಸಿಬಿಐ ಮನವಿ ಮಾಡಿತು.

ಸಿಬಿಐ ವಾದವನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್,  ಸೆಂಗಾರ್ ಬಿಡುಗಡೆ ಮಾಡದಂತೆ ಸೂಚಿಸಿತು.   ಕುಲದೀಪ್ ಸಿಂಗ್ ಸೆಂಗರ್ ಗೆ ನೋಟಿಸ್ ನೀಡಿ ಪ್ರಕರಣ ವಿಚಾರಣೆಯನ್ನು 1 ತಿಂಗಳ ಕಾಲ ಮುಂದೂಡಿಕೆ ಮಾಡಿದೆ.

Key words: Unnao, rape case, Supreme Court, accused, Kuldeep Singh Sengar