ಬೆಂಗಳೂರು,ಡಿಸೆಂಬರ್,29,2025 (www.justkannada.in): ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, 354ಎ ಅಡಿ ಪ್ರಕರಣವನ್ನು ನ್ಯಾಯಾಲಯ ಕೈ ಬಿಟ್ಟಿದೆ.
ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ದದ 354ಎ ಅಡಿ ದಾಖಲಾಗಿದ್ದ ಪ್ರಕರಣವನ್ನು ಕೈಬಿಟ್ಟು ಬೆಂಗಳೂರಿನ 42ನೇ ಎಸಿಜೆಎಂ ಜಡ್ಜ್ ಕೆಎನ್ ಶಿವಕುಮಾರ್ ಆದೇಶಿಸಿದ್ದಾರೆ.
ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ದ ಹೊಳೆನರಸಿಪುರ ಮಹಿಳೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಬಂಧಿತರಾಗಿದ್ದರು. ಎರಡು ಸೆಕ್ಷನ್ ಗಳಲ್ಲಿ ಹೈಕೋರ್ಟ್ ಒಂದು ಸೆಕ್ಷನ್ ರದ್ದು ಪಡಿಸಿತ್ತು. 354ಎ ಅಡಿಯ ಕೇಸ್ ಕಾಗ್ನಿಜೆನ್ಸ್ ಪಡೆಯಲು 42ನೇ ಎಸಿಜೆಎಂ ಕೋರ್ಟ್ ನಿರಾಕರಿಸಿದೆ.
Key words: Sexual assault, case, Big relief, former minister, H.D. Revanna







