ಮೈಸೂರು, ಡಿ.೨೯,೨೦೨೫: ನಗರದ ಚಾಮುಂಡಿ ಬೆಟ್ಟಕ್ಕೆ ಡಿ. 31ರ ರಾತ್ರಿ 7 ಗಂಟೆಯಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ ಪೊಲೀಸ್ ಆಯುಕ್ತರು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕರ್ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದ ರೀತಿ ಬಿಗಿ ಪೊಲೀಸ್ ಬಂದೋಬಸ್ತ್ . ಹೊಸ ವರ್ಷಚರಣೆಗೆ 4 ಡಿಸಿಪಿ, 7ಎಸಿಪಿ, 29 ಇನ್ಸ್ಪೆಕ್ಟರ್ , 55 ಸಬ್ ಇನ್ಸ್ಪೆಕ್ಟರ್,103 ಎಎಸ್ಐ,761 ಪುರುಷ ಪೊಲೀಸ್, 154 ಮಹಿಳಾ ಪೊಲೀಸರು ಸೇರಿದಂತೆ ಒಟ್ಟು 1113 ಪೊಲೀಸರ ನಿಯೋಜನೆ.

ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಹೆಚ್ಚಿನ ಸಿಸಿ ಕ್ಯಾಮರಾ ಆಳವಡಿಸಿವುದಕ್ಕೆ ಮುಂದಾದ ಖಾಕಿ ಪಡೆ. ನಗರ ವ್ಯಾಪ್ತಿಯಲ್ಲಿ ಡಿಜೆ ಬಳಸವುದಕ್ಕೆ ನಿರ್ಬಂಧ ಹೇರಿಕೆ. ಡಿ. 31 ರಾತ್ರಿಯಿಂದ ಬೆಳಗ್ಗೆಯ ವರೆಗೂ ಚಾಮುಂಡಿ ಪಡೆ, 112 ಸೇರಿಂದತೆ ನಗರದ ಎಲ್ಲಾ ಕಡೆ ಪೊಲೀಸರ ಗಸ್ತು. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಹೊರ ಭಾಗದಲ್ಲಿ ಎಲ್ಲಾ ಕಡೆ ಚೆಕ್ ಪೊಸ್ಟ್ ನಿರ್ಮಾಣ.
ಪೊಲೀಸರ ಮಾರ್ಗಸೂಚಿ ಹೀಗಿದೆ..

- ಸಾರ್ವಜನಿಕರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ/ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ನಗರದಲ್ಲಿ ಪೊಲೀಸ್ ನಿರೀಕ್ಷಕರುಗಳು ನೇತೃತ್ವದಲ್ಲಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಗಳು ಕಾರ್ಯನಿರತವಾಗಿದ್ದು ಅಂತವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಮಹಿಳೆಯರ ರಕ್ಷಣೆಯ ಹಿತದೃಷ್ಟಿಯಿಂದ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ ( ಚಾಮುಂಡಿ ಪಡೆ) ಪಡೆಗಳು ಗಸ್ತಿನಲ್ಲಿರುತ್ತದೆ.
- ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆ ನಡೆಸಲಾಗುವುದು.
- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಣಾವಲು ನಿರ್ವಹಿಸಲಾಗುತ್ತದೆ.
- ಹೊಸವರ್ಷಾಚರಣೆ ನೆಪದಲ್ಲಿ ವಾಹನಗಳನ್ನು ವೀಲಿಂಗ್ (wheeling) ಮತ್ತು ಡ್ರಾಗ್ ರೇಸ್ ಮಾಡುವುದನ್ನು ಹಾಗೂ ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಒಳಗೊಂಡ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಲಾಗಿದೆ. ಸದರಿ ಪಡೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಚಾಲನೆಯಲ್ಲಿರುತ್ತದೆ, ಕಾನೂನು ಉಲ್ಲಂಘಿಸುವ ಪ್ರಕರಣಗಳು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು.
- ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ಮತ್ತು ಕಿಡಿಗೇಡಿಗಳ ಬಗ್ಗೆ ನಿಗಾವಹಿಸಲು ಚೆಕ್ ಪೋಸ್ಟ್‌ಗಳನ್ನು ತೆರೆಯುವುದರ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 112 ವಾಹನ, ಹೈವೇ ಪೆಟ್ರೋಲ್ ವಾಹನಗಳನ್ನು ನಿಯೋಜಿಸಲಾಗುವುದು.
- ಬಲೂನ್ ಗಳಿಗೆ ಅನಧಿಕೃತ ಸಿಲಿಂಡರ್‌ಗಳ ಮೂಲಕ ಯಾವುದೇ ರೀತಿಯ ಅನಿಲ ತುಂಬಿ ಮಾರಾಟ ಮಾಡುವುದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
- ಡಿ.ಜೆ. ಬಳಸುವುದನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಶಬ್ದ ಮಾಲಿನ್ಯ ಪರಿಶೀಲನಾ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದ್ದು, ಡಿ.ಜೆ. ಬಳಸುವುದು ಕಂಡು ಬಂದರೆ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
- ಮೈಸೂರು ನಗರದಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಸರಹದ್ದಿನ ಆಗಮನ ಮತ್ತು ನಿರ್ಗಮನ ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ನಿಗಾವಹಿಸಲಾಗಿದೆ.
- ಸಾರ್ವಜನಿಕರು ಯಾವುದೇ ರೀತಿಯ ತೊಂದರೆಯಾದಲ್ಲಿ ಪೊಲೀಸ್ ಕಂಟ್ರೋಲ್ ರೂಂ. ದೂರವಾಣಿ ಸಂಖ್ಯೆ: 0821-2418339 ಅಥವಾ 0821-2418139 ಅಥವಾ 112 ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

31-12-2025 ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹೋಂ ಸ್ಟೇ, ಸರ್ವಿಸ್ ಅಪಾರ್ಟ್‌ಮೆಂಟ್, ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘಸಂಸ್ಥೆಗಳು ಪೊಲೀಸ್ ಆಯುಕ್ತರ ಕಛೇರಿಯಿಂದ ಅನುಮತಿ ಪಡೆದು ಮಧ್ಯರಾತ್ರಿ 01-00 ಗಂಟೆಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸುವುದು. ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸುವುದು.

ಯಾವುದೇ ಪ್ರಕರಣಗಳು ಸಂಭವಿಸಿದ್ದಲ್ಲಿ ಸದರಿ ಪ್ರಕರಣಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗುವಂತೆ ಸಾರ್ವಜನಿಕರು ತಮ್ಮ ಅಂಗಡಿ, ಮನೆ ಇತ್ಯಾದಿ ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು.
ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಶಬ್ದವು ಕಾನೂನಿನ ಅಡಿಯಲ್ಲಿ ನಿರ್ಧಿಷ್ಟ ಪಡಿಸಿರುವ ಡೆಸಿಬಲ್‌ಗಳನ್ನು ಮೀರದಂತೆ ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು ಹಾಗೂ ಪೊಲೀಸ್ ಅನುಮತಿ ಪಡೆಯಬೇಕು.
ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ, ಮಾದಕ ವಸ್ತುಗಳ ಸೇವನೆ, ಜೂಜಾಟ ನಡೆಸುವುದನ್ನು ನಿಷೇಧಿಸಿದ್ದು, ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಚೆಗೆ ವಿರುದ್ಧವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಉಂಟುಮಾಡಿದ್ದಲ್ಲಿ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು.

ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ದಿನಾಂಕ 31-12-2025 ರ ರಾತ್ರಿ 7-00 ಗಂಟೆ ನಂತರ ಚಾಮುಂಡಿಬೆಟ್ಟಕ್ಕೆ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿಬೆಟ್ಟ ಪಾದದ ಗೇಟ್, ಲಲಿತಮಹಲ್ ಗೇಟ್ ಮೂಲಕ ಪ್ರವೇಶವನ್ನು ನಿರ್ಭಂದಿಸಲಾಗಿದೆ. ತಾವರೆಕಟ್ಟೆ ಗೇಟ್ ಮುಖಾಂತರ ದಿನಾಂಕ 31-12-2025 ರ ರಾತ್ರಿ 8-00 ಗಂಟೆ ನಂತರ ಪ್ರವೇಶವನ್ನು ನಿರ್ಭಂಧಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ಯಾವುದೇ ರೀತಿಯ ಊಟ, ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ರಾತ್ರಿ 9-00 ಗಂಟೆ ನಂತರ ಸಾರ್ವಜನಿಕರು ಚಾಮುಂಡಿಬೆಟ್ಟದಿಂದ ವಾಪಸ್ಸು ಬರುವಂತೆ ಸೂಚಿಸಲಾಗಿದೆ. ಇದು ಚಾಮುಂಡಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಸುವುದಿಲ್ಲ. ಚಾಮುಂಡಿಬೆಟ್ಟದಿಂದ ರಾತ್ರಿ 9-00 ಗಂಟೆ ನಂತರ ವಾಪಸ್ಸು ಬರುವವರು ತಾವರೆಕಟ್ಟೆ ದ್ವಾರದ ಮುಖಾಂತರ ಬರುವಂತೆ ಸೂಚಿಸಲಾಗಿದೆ.
ನಿರ್ಜನ ರಸ್ತೆ/ಪ್ರದೇಶ, ಪಾರ್ಕ್, ರಿಂಗ್ ರಸ್ತೆ, ಹೈವೇ ರಸ್ತೆಗಳಲ್ಲಿ ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವವರ ವಿರುದ್ಧ ಕಾನೂನು ರೀತ್ಯಾ ಪ್ರಕರಣ ದಾಖಲು ಮಾಡಲಾಗುವುದು.
ಸೋಷಿಯಾಲ್ ಮೀಡಿಯಾ ಮೂಲಕ ಹೊಸ ವರ್ಷಾಚರಣೆ ಸಂಬಂಧ ಸಾರ್ವಜನಿಕರಿಗೆ ಆತಂಕ ಮೂಡಿಸುವ ಪೋಸ್ಟ್‌ಗಳನ್ನು ಮತ್ತು ಅಪಪ್ರಚಾರ ಪೋಸ್ಟ್‌ಗಳನ್ನು ಹಾಕಿದ್ದಲ್ಲಿ ಸದರಿಯವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಹೊಸ ವರ್ಷದ ಸಂಬಂಧ ಸಾಮಾಜಿಕ ಜಾಲಾತಾಣಗಳ ಮೂಲಕ ಉಡುಗೊರೆ ನೀಡುವ / ಉಡುಗೊರೆ ಬಂದಿರುವ ನೆಪದಲ್ಲಿ ಕಳುಹಿಸುವ ಯಾವುದೇ ಅಪರಿಚಿತ ಲಿಂಕ್ ಗಳಿಗೆ ಮರುಳಾಗಿ ಡಿಜಿಟಲ್ ಮೋಸಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸುವುದು.
key words: Guidelines, for New Year celebrations, in Mysore Entry, Chamundi Hills banned, DJ use restricted.

SUMMARY:
Guidelines for New Year celebrations in Mysore: Entry to Chamundi Hills banned, DJ use restricted

Tight police deployment to prevent any untoward incident. A total of 1113 police personnel including 4 DCPs, 7 ACPs, 29 Inspectors, 55 Sub Inspectors, 103 ASIs, 761 male policemen, 154 female policemen have been deployed for the New Year celebrations.
Khaki force to install more CCTV cameras in crowded places. Restriction on using DJs in the city limits. Chamundi force, 112 personnel patrolling all over the city from the night of 31st till morning. Check posts constructed everywhere on the outskirts of the city as a precautionary measure.






