ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ರೈಲು ಸಂಚಾರದ ಸಮಯ ವಿಸ್ತರಣೆ

ಬೆಂಗಳೂರು, ಡಿಸೆಂಬರ್, 31,2025 (www.justkannada.in): ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರು ಸಂಭ್ರಮ ಕಳೆಗಟ್ಟಲು ಸಜ್ಜಾಗಿದೆ. ಈ ನಡುವೆ ಹೊಸ ವರ್ಷಾಚರಣೆ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ  ರೈಲು ಸಂಚಾರವನ್ನ ಮಧ್ಯರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಕುರಿತು  ಮಾಹಿತಿ ಹಂಚಿಕೊಂಡಿರುವ ಬಿಎಂಆರ್​ಸಿಎಲ್ , ಹೊಸ ವರ್ಷದ ಸಂಭ್ರಮದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ.

ಕೊನೆಯ ರೈಲುಗಳು ಹೊರಡುವ ಸಮಯದ ವಿವರ  ಹೀಗಿದೆ.

ನೇರಳೆ ಮಾರ್ಗ: ವೈಟ್‌ಫೀಲ್ಡ್ ನಿಂದ ಚಲ್ಲಘಟ್ಟದ ವರೆಗೆ – ಬೆಳಗಿನ ಜಾವ 1:45ಗಂಟೆಗೆ, ಚಲ್ಲಘಟ್ಟದಿಂದ ವೈಟ್​ಫೀಲ್ಡ್ ವರೆಗೆ – ಬೆಳಗಿನ ಜಾವ 2 ಗಂಟೆಗೆ

ಹಸಿರು ಮಾರ್ಗ: ಮಾದಾವರ ದಿಂದ ರೇಷ್ಮೆ ಸಂಸ್ಥೆಯ ವರೆಗೆ – ಬೆಳಗಿನಜಾವ 2 ಗಂಟೆಗೆ, ರೇಷ್ಮೆ ಸಂಸ್ಥೆಯಿಂದ ಮಾದಾವರದ ವರೆಗೆ: ಬೆಳಗಿನಜಾವ 2:00ಗಂಟೆಗೆ

ಹಳದಿ ಮಾರ್ಗ: ಆ.ರ್‌ವಿ ರಸ್ತೆ ಯಿಂದ ಬೊಮ್ಮಸಂದ್ರದ ವರೆಗೆ – ಬೆಳಗಿನಜಾವ 3:10 ಗಂಟೆಗೆ, ಬೊಮ್ಮಸಂದ್ರ ದಿಂದ ಆರ್‌ವಿ ರಸ್ತೆಯ ವರೆಗೆ – ಬೆಳಗಿನಜಾವ 1:30 ಗಂಟೆಗೆ

31ನೇ ಡಿಸೆಂಬರ್ 2025ರ ರಾತ್ರಿ 11.30ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ ಹಾಗೂ ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚಾರ ನಡೆಸಲಿವೆ. ಇನ್ನು ಟಿಕೆಟ್ ಕೌಂಟರ್‌ ಗಳಲ್ಲಿ ಜನ ದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ, ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರಾತ್ರಿ 11 ರ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು ಕ್ಯೂಆರ್ ಟಿಕೆಟ್‌ ಗಳ ಮೂಲಕ, ಮುಂಗಡವಾಗಿ ರಿಟರ್ನ್ ಟಿಕೆಟ್ ಖರೀದಿಸುವಂತೆ ಸಲಹೆ ನೀಡಲಾಗಿದೆ.

Key words: New Year, Celebration, Namma Metro, timings, extended