ಮೈಸೂರು, ಜನವರಿ,2,2026 (www.justkannada.in): ಮೈಸೂರಿನಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸ್ಥಾಪಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್, ಬೀದಿಬದಿ ಮಾರಾಟಗಾರರಿಗೆ ಪೂರಕವಾಗಿ ಕೆಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ತೊಂದರೆ ಎದುರಾಗಬಾರದು. ಮೈಸೂರಿನಲ್ಲಿ ಬೀದಿಬದಿ ಮಾರಾಟ ವಲಯಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ತಿಳಿಸಿದರು.
ನಗರದಲ್ಲಿ ಸುರಕ್ಷತೆ, ಭದ್ರತೆ ಮತ್ತು ಸ್ವಚ್ಛತೆಯನ್ನು ಖಚಿತಪಡಿಸಬೇಕಾಗಿದೆ. ಎಲ್ಲಾ ಮಾರಾಟಗಾರರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡಬೇಕು. ವಲಯಗಳನ್ನು ರಚಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರಿಗಳಿಗೆ ತೊಂದರೆಯಾಗಬಾರದು.ಎಲ್ಲಾ ಮಾರಾಟಗಾರರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಸಂಸದ ಯದುವೀರ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಮೈಸೂರು ಸ್ವಚ್ಛ ಮತ್ತು ಪರಂಪರೆಯ ನಗರವಾಗಿದೆ. ಈ ನಿಟ್ಟಿನಲ್ಲಿ ಮುಂದುವರಿಸಿಕೊಂಡು ಹೋಗಲು ಕೆಲವು ಪರಿಣಾಮಕಾರಿ ಯೋಜನೆ ರೂಪಿಸಬೇಕು. ಅದನ್ನು ಕಾರ್ಯಾನುಷ್ಠಾನ ಮಾಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು.
ಕೆಲವು ಬೀದಿಬದಿ ವ್ಯಾಪಾರಿಗಳ ವಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತೇನೆ. ಅತಿ ಶೀಘ್ರದಲ್ಲೇ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಂಸದ ಯದುವೀರ್ ಮಾಹಿತಿ ನೀಡಿದರು.
ಹಾಕಿಂಗ್ ವಲಯ ಸ್ಥಾಪಿಸಿ
ದಸರಾ ಮತ್ತು ಇತರ ಜಾತ್ರೆ, ಉತ್ಸವ, ರಥೋತ್ಸವ ಸಂದರ್ಭದಲ್ಲಿ ಒಳಹರಿವು ಹೆಚ್ಚಾದಾಗ ವಿಶೇಷ ಹಾಕಿಂಗ್ ವಲಯಗಳನ್ನು ರಚಿಸಬಹುದು. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ಅಧಿಕಾರಿಗಳು, ವಿವಿಧ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
Key words: street vendor zone, Mysore, MP, Yaduveer







