ಮನರೇಗಾ ಯೋಜನೆ ಹೆಸರು ಬದಲಾವಣೆ: ಕೇಂದ್ರದಿಂದ ಸರ್ವಾಧಿಕಾರಿ ಧೋರಣೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,3,2026 (www.justkannada.in):  ಮನರೇಗಾ ಯೋಜನೆ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ನಮ್ಮ ಅಭಿಪ್ರಾಯವನ್ನು ಪಡೆಯದೇ ಸರ್ವಾಧಿಕಾರಿ ಧೋರಣೆ ಪ್ರದರ್ಶನ ತೋರಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಗೃಹಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮನರೇಗಾ ಯೋಜನೆಯನ್ನು ವಿಬಿ ಜೀ ರಾಮ್ ಜೀ ಎಂದು ಮರುನಾಮಕರಣ ಮಾಡಿದ್ದಾರೆ.  ಹೆಸರು ಬದಲಾವಣೆಗೆ ಬಗ್ಗೆ ಕೇಂದ್ರ ಸರ್ಕಾರ ಅಭಿಪ್ರಾಯ ಪಡೆದಿಲ್ಲ.  ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡಿದೆ. ದೇಶದಲ್ಲಿ ಸುಮಾರು 12 ಕೋಟಿ 16 ಲಕ್ಷ ಕಾರ್ಮಿಕರಿದ್ದಾರೆ. ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದ ರಾಜ್ಯದಲ್ಲಿ 36.75 ಲಕ್ಷ ಮಹಿಳ ಮನರೇಗಾ ಕಾರ್ಮಿಕರಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಮನರೇಗಾ ಯೋಜನೆ ಬಗ್ಗೆ ನಿನ್ನೆ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ. ಮನಮೋಹನ್ ಸಿಂಗ್ ಪಿಎಂ ಆಗಿದ್ದಾಗ ಈ ಯೋಜನೆ ಜಾರಿ ಮಾಡಿದರು. ಸಾಮಾನ್ಯ ಜನರು ರೈತರಿಗೆ ಹಕ್ಕು ನೀಡುವ ಕೆಲಸ ಮಾಡಲಾಗಿತ್ತು. ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿತ್ತು. ಅದರಲ್ಲಿ ಉದ್ಯೋಗ ಖಾತರಿ ಯೋಜನೆ ಕೂಡ ಇಂದು ಈಗ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿದೆ ಎಂದು  ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Key words: Change, name, MNREGA scheme, Centre, CM Siddaramaiah