ಬಳ್ಳಾರಿ SP ಪವನ್‌ ನಜ್ಜೂರ್‌ ಆತ್ಮಹತ್ಯೆ ಯತ್ನ ವದಂತಿ: ಆಪ್ತರ ಸ್ಪಷ್ಟನೆ

ಬೆಂಗಳೂರು, ಜನವರಿ, 3,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಫೈರಿಂಗ್ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್‌ ಪಿ ಪವನ್ ನಜ್ಜೂರ್ ಅವರು ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ  ಎಂಬ ಸುದ್ದಿಗಳು ಹರಿದಾಡಿದ್ದು ಈ ವದಂತಿ ಬಗ್ಗೆ ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಸ್ನೇಹಿತ, ಬೆಂಗಳೂರು ಸಿಸಿಬಿ ಡಿಸಿಪಿ ಶ್ರೀಹರಿಬಾಬು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಶಿರಾ ಬಳಿಯ ಫಾರ್ಮ್‌ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪವನ್‌ ಆತ್ಮಹತ್ಯೆಗೆ ಯತ್ನಿಸಿಲ್ಲ ಅದು ಸುಳ್ಳು ಎಂದು ತಿಳಿಸಿದ್ದಾರೆ.

ಪವನ್ ನೆಜ್ಜೂರ ಅವರು ಜ.1 ರಂದು ಅಧಿಕಾರ ಸ್ವೀಕರಿಸಿದ್ದರು. ಇದಾದ ಬಳಿಕ ಬಳ್ಳಾರಿಯಲ್ಲಿ ಗಲಾಟೆ ನಡೆದು ಫೈರಿಂಗ್ ನಿಂದಾಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಬಲಿಯಾಗಿದ್ದರು.  ಇದಾದ ನಂತರ ನಿರ್ಲಕ್ಷ್ಯದ ಆರೋಪದ ಮೇಲೆ ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಅವರನ್ನು ಅಮಾನತು ಮಾಡಿತ್ತು. ಈ ಹಿನ್ನೆಲೆಯಲ್ಲಿ  ಪವನ್‌ ನಿಜ್ಜೂರ್‌  ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು.

Key words: Ballari, SP, Pawan Najjoor, suicide, attempt, rumour, Clarification