ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮೂವರ ಬಂಧನ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಜನವರಿ,5,2026 (www.justkannada.in): ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೂಜೆ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನ ವಶಕ್ಕೆ ಪಡೆದಿದ್ದಾರೆ. 15, 16 ನೇ ವಯೋಮಾನದ ಮೂವರನ್ನ ವಶಕ್ಕೆ ಪಡೆಯಲಾಗಿದೆ.  ತನಿಖೆ ನಡೆಸಿ  ಪ್ರಚೋದನೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಿಜೆಪಿಯವರು ಹೇಳುತ್ತಿರುತ್ತಾರೆ. ಅವರು ಹೇಳೋದು ನಿಲ್ಲಿಸುವುದಿಲ್ಲ ಇಂತಹ ಘಟನೆ ಆದಾಗ ಬಿಜೆಪಿಯವರು ಮೊದಲು ಬರುತ್ತಾರೆ.  ಬಿಜೆಪಿ ಹೇಳೋದಕ್ಕೆ ಮುಂಚೆನೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

Key words: Stone pelting, Om Shakti, devotees, Three, arrested, Parameshwar