ಬೆಂಗಳೂರು,ಜನವರಿ,8,2026 (www.justkannada.in): ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅವರೇ ವಿವಸ್ತ್ರಗೊಂಡಿದ್ದಾರೆ. ಪ್ರಕರಣ ಕುರಿತು ಪೊಲೀಸ್ ಆಯುಕ್ತ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಂಡಿಲ್ಲ. ಹೆಣ್ಣುಮಗಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದರು.
ನಿನ್ನೆ ಕೇಶ್ವಾಪುರ ಠಾಣಾ ಪೊಲೀಸರು ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯನ್ನ ಬಂಧಿಸಿ ಆಕೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸ್ಪಷ್ಟನೆ ನೀಡಿದ್ದ ಪೊಲೀಸ್ ಕಮಿಷನರ್ ಶಶಿಕುಮಾರ್ ಪೊಲೀಸರು ಮಹಿಳೆಯನ್ನ ವಿಸ್ತ್ರಗೊಳಿಸಿಲ್ಲ. ಮಹಿಳೆಯೇ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದಿದ್ದರು.
Key words: Police, Assault, woman, Home Minister, Parameshwar







