ಬೆಂಗಳೂರು, ಜನವರಿ,8,2026 (www.justkannada.in): ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರುವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ.
ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು.
ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ. ಕಂಡಿಷನ್ ಹಾಕಿ ಸಂತ್ರಸ್ತರಿಗೆ ಮನೆಗಳನ್ನ ನೀಢಲಾಗುತ್ತದೆ. ಹೊರಗಿನವರಿಗೆ ಯಾವುದೇ ಕಾರಣಕ್ಕೂ ಮನೆ ನೀಡಲ್ಲ. 26 ಜನರ ದಾಖಲೆಗಳು ಸೂಕ್ತವಾಗಿದ್ದು ಅವರಿಗೆ ಮನೆ ಹಂಚಿಕೆ ಮಾಡುತ್ತೇವೆ. ಸಿಎಂ ಈಗಾಗಲೇ ಸಭೆ ಮಾಡಿ ಮನೆ ನೀಡಲು ಸೂಚಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
Key words: Kogilu Layout, illegal house, eviction, Minister, Zameer Ahmed Khan







