ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್:  ಘಟನೆ ಕುರಿತು ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು,ಜನವರಿ,8,2026 (www.justkannada.in):   ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು ಘಟನೆ ಕುರಿತು ವರದಿ ನೀಡುವಂತೆ ಸೂಚನೆ ನೀಡಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ರವಾನಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ, ಘಟನೆ ಕುರಿತು ಕ್ರಮ ಕೈಗೊಂಡಿರುವ ಬಗ್ಗೆ  5ದಿನದೊಳಗೆ ವಿಸ್ತೃತ ವರದಿ  ನೀಡುವಂತೆ ನಿರ್ದೇಶನ ನೀಡಿದೆ ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಪೋರೇಟರ್ ದೂರಿನ ಮೇರೆಗೆ ಬಂಧಿಸಲು ಹೋದ ವೇಳೆ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಕೇಶ್ವಾಪುರ ಠಾಣಾ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪ ಕುರಿತು ಸ್ಪಷ್ಟನೆ ನೀಡಿದ್ದ ಪೊಲೀಸರು ಬಂಧಿಸುವ ವೇಳೆ ಆಕೆಯೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

Key words: Woman, assaulted, National Commission for Women, report