ಮಂಗಳೂರು,ಜನವರಿ,10,2026 (www.justkannada.in): ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ಹತ್ತಿಕ್ಕುತ್ತಿದ್ದು, ಹೀಗಾಗಿ ಜನವರಿ 26ರಿಂದ ಮನರೇಗಾ ಉಳಿಸಿ ಅಭಿಯಾನ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮನರೇಗಾ ಯೋಜನೆ ಉಳಿಸಲು ಹೋರಾಟ ಮಾಡುತ್ತೇವೆ. ಇಡೀ ರಾಜ್ಯದಾದ್ಯಂತ ಮನರೇಗಾ ಉಳಿಸಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು ಎಂದರು.
ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಇದೆ. ಆ ಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಅಸ್ಸಾಂ ಚುನಾವಣೆ ಹಿನ್ನೆಲೆ ವೀಕ್ಷಕರಾಗಿ ಜವಾಬ್ದಾರಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಪಕ್ಷ ನನಗೆ ಜವಾಬ್ದಾರಿ ನೀಡಿದೆ. ಈ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ” ಎಂದು ತಿಳಿಸಿದರು.
Key words: Save, MNREGA campaign, January 26th, DCM, DK Shivakumar







