ಇಂದು ಸಿಎಂ ಮತ್ತು ಡಿಸಿಎಂ ಕಲಬುರಗಿ ಜಿಲ್ಲಾ ಪ್ರವಾಸ

ಕಲಬುರಗಿ,ಜನವರಿ,12,2026 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಂದು ಕಲಬುರಗಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಂಗಳೂರಿನಿಂದ ಬೆಳೀಗ್ಗೆ 11.40ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಯಡ್ರಾಮಿ ಮತ್ತು ಸೇಡಂನಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಸುಮಾರು 1,535 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸೇರಿ ಸಚಿವರ ದಂಡೆ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

Key words: CM Siddaramaiah, DCM, DK Shivakumar, visit, Kalburgi