ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

ಹಾಸನ,ಜನವರಿ,13,2026 (www.justkannada.in): ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೋಭಾ(40) ಮೃತ ಕಾರ್ಮಿಕ ಮಹಿಳೆ. ಕಾಫಿ ತೋಟದಲ್ಲಿ ಮಹಿಳೆ ಶೋಭಾ ಕೆಲಸ ಮಾಡುತ್ತಿದ್ದ ವೇಳೆ ಏಕಾ ಏಕಿ ಕಾಡಾನೆ ದಾಳಿ ಮಾಡಿದ್ದು ಈ ವೇಳೆ ಮಹಿಳೆಯನ್ನು ತುಳಿದು ಸಾಯಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Woman worker, death, wild elephant, attack