ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ನಾವ್ಯಾರು ಕೇಳಿಲ್ಲ; ಡಿಕೆಶಿ ಸಿಎಂ ಆಗುವ ವಿಶ್ವಾಸ ವ್ಯಕ್ತಪಡಿಸಿದ ‘ಕೈ’ ಶಾಸಕ

ಮಂಡ್ಯ,ಜನವರಿ,13,2026 (www.justkannada.in): ನಾವ್ಯಾರು ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಿ ಎಂದು ಕೇಳಿಲ್ಲ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮದ್ದೂರು ಶಾಸಕ ಕದಲೂರು ಉದಯ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕದಲೂರು ಉದಯ್, ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಅಸೆ ಇದೆ.  ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾನು ಭವಿಷ್ಯ ಹೇಳಲ್ಲ. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂಬ ವಿಶ್ವಾಸವಿದೆ ಎಂದರು.

ವರಿಷ್ಠರು ರಾಜ್ಯಕ್ಕೆ ಬಂದಾಗ ಸಿಎಂ ಭೇಟಿ ಮಾಡೋದು ಸಹಜ.  ಸಿಎಂ ಸ್ಥಾನವನ್ನು ಬಿಟ್ಟುಕೊಡಿ ಅಂತಾ ನಾವ್ಯಾರು ಕೇಳಿಲ್ಲ.  ಡಿಕೆ ಶಿವಕುಮಾರ್ ಗೆ ಒಂದು ಅವಕಾಶ ಕೊಡಲಿ ಎಂಬುದು ನಮ್ಮ ಒತ್ತಾಯ. ಕೊಟ್ಟ ಮಾತು ಅಂದ್ರೆ  ಆ ಚರ್ಚೆಯಲ್ಲಿ ನಾವು ಇರಲಿಲ್ಲ.  ಬದಲಾವಣೆ ವದಂತಿಗೆ ಕಿವಿ ಕೊಡೋದು ಬೇಡ. ಅಧಿಕೃತವಾಗಿ ಬರಲಿ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

Key words: CM post, DK Shivakumar,  congress MLA