ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಜೀವ ಬೆದರಿಕೆ

ಚಿಕ್ಕಬಳ್ಳಾಪುರ, ಜನವರಿ 14,2026 (www.justkannada.in): ಅಕ್ರಮವಾಗಿ ಹಾಕಲಾಗಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ  ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಕಲ್ಟ್ ಚಿತ್ರದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕೆಪಿಸಿಸಿ ರಾಜ್ಯ ಸಂಯೋಜಕ  ರಾಜೀವ್ ಗೌಡ  ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.

ಆರೋಪಿತ ರಾಜೀವ್ ಗೌಡ ಅವರು ಕೆಪಿಸಿಸಿ ರಾಜ್ಯ ಸಂಯೋಜಕರಾಗಿದ್ದು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ದೂರವಾಣಿ ಕರೆ ವೇಳೆ ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪೌರಾಯುಕ್ತೆ ಅಮೃತಾ ಗೌಡ ಆರೋಪಿಸಿದ್ದಾರೆ.  ಅಲ್ಲದೆ ಜೀವ ಬೆದರಿಕೆ ಹಾಕಿರುವುದಕ್ಕೆ ಅಮೃತಗೌಡ ಅವರು ಮನನೊಂದು ಅಧಿಕಾರಿಗಳು ಸಿಬ್ಬಂದಿ ಮುಂದೆ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

Key words: Congress leader, threatens , Municipal, Commissioner