ಬೆಂಗಳೂರು,ಜನವರಿ,14,2026 (www.justkannada.in): ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತ್ಯೇಕ ಮಾತುಕತೆ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಶರಣ ಪ್ರಕಾಶ್ ಪಾಟೀಲ್, ರಾಜಕೀಯ ವಿಷಯ ಮಾತನಾಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಜನವರಿ 28ರಿಂದ ಸಂಸತ್ ಬಜೆಟ್ ಅಧಿವೇಶನ ಶುರುವಾಗುತ್ತದೆ. ರಾಜ್ಯದ ಅನೇಕ ವಿಷಯಗಳು ಸಂಸತ್ ನಲ್ಲಿ ಚರ್ಚೆಯಾಗಬೇಕು. ಈ ವಿಚಾರ ಬಗ್ಗೆ ರಾಹುಲ್ ಗಾಂಧಿ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚಿಸಿದ್ದಾರೆ ಅಷ್ಟೆ ಎಂದರು.
ನಿನ್ನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಕೆಲಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದರು.
Key words: Rahul Gandhi, discussion, CM, DCM, Minister, Sharan Prakash Patil







