ಜ. 22ರಿಂದ ವಿಶೇಷ ಅಧಿವೇಶನ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು, ಜನವರಿ,14,2026 (www.justkannada.in):  ಜನವರಿ 22ರಿಂದ ಜನವರಿ 31ರವರೆಗೆ ವಿಶೇಷ ಅಧಿವೇಶನ ನಡೆಸಲು ಸಚಿವ ಸಂಪುಟ​​ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಜನವರಿ 22ರಿಂದ ಜನವರಿ 31ರವರೆಗೆ ವಿಶೇಷ ವಿಧಾನ ಮಂಡಲ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.  ವಿಬಿಜಿ ರಾಮ್ ಜಿ ಕಾಯ್ದೆ 2025 ಸಮಾಜದ ಮೇಲೆ ಬೀರುವ ಪರಿಣಾಮಗಳ ಕುರಿತು ಜಂಟಿ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣ ಅನುಮೋದಿಸಲು ಸಿಎಂಗೆ ಪರಮಾಧಿಕಾರ ನೀಡಲಾಗಿದೆ. ವಿಬಿ ಜಿ ರಾಮ್ ಜಿ ಪರಿಣಾಮಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

Key words: Special session, Jan. 22, Decision,  cabinet meeting