ಬೆಂಗಳೂರು,ಜನವರಿ,14,2026 (www.justkannada.in): ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ವಿಚಾರಣೆಗೆ ಹಾಜರಾಗುವಂತೆ ಬಿ.ನಾಗೇಂದ್ರರಿಗೆ ಸಿಬಿಐ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಕೋರ್ಟ್ ಮೊರೆ ಹೋಗಿದ್ದರು.
ಇದೀಗ ನಾಗೇಂದ್ರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಆದೇಶಿಸಿದ್ದಾರೆ. ಹಾಗೆಯೇ 15 ದಿನಗಳೊಳಗೆ ತನಿಖಾಧಿಕಾರಿಗಳ ಮುಂದ ಹಾಜರಾಗಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
Key words: Big relief, former minister, B. Nagendra, Anticipatory bail







