ನವದೆಹಲಿ,ಜನವರಿ,16,2026 (www.justkannada.in): ನಾನು ಹೈಕಮಾಂಡ್ ನಾಯಕರ ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ಸಿಎಂ ಸ್ಥಾನ ಎಂಬುದು ಬಹಿರಂಗವಾಗಿ ಚರ್ಚಿಸುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಬಂದಿದ್ದೇನೆ ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಸಭೆ ಇದೆ. ನಮ್ಮ ಪಕ್ಷದ ಯೋಜನೆಗಳನ್ನ ಬಹಿರಂಗಪಡಿಸಲು ಹೇಗೆ ಸಾಧ್ಯ? ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು ಎಂದರು.
ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ, ಅವರು ನೀಡುತ್ತಾರೆ. ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು.
ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: Delhi, high command, discussion, DCM DK Shivakumar







