Friday, September 11, 2026

BDA Apartments

O último dia de um condenado : Descubra, Guarde, Compartilhe BDA JK_Adv BDA Adv
Home Front Page ಮುಂಬೈ ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು: ಬೆಂಗಳೂರಿನಲ್ಲಿ ಸಂಭ್ರಮಾಚರಣೆ

ಮುಂಬೈ ಮಹಾನಗರ ಪಾಲಿಕೆ ಚುನಾವಣೆ, ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು: ಬೆಂಗಳೂರಿನಲ್ಲಿ ಸಂಭ್ರಮಾಚರಣೆ

ಬೆಂಗಳೂರು,ಜನವರಿ,16,2026 (wwe.justkannada.in):  ಮಹಾರಾಷ್ಟ್ರದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ –ಶಿವಸೇನೆ (ಶಿಂಧೆ) ಮೈತ್ರಿಕೂಟ ಭರ್ಜರಿ ಗೆಲವು ಸಾಧಿಸಿದೆ.

ಮುಂಬೈ ಮಹಾನಗರ ಪಾಲಿಕೆಯ 227 ಸ್ಥಾನಗಳಲ್ಲಿ ಬಿಜೆಪಿ ಶಿವಸೇನೆ(ಶಿಂಧೆ) ಮೈತ್ರಿಕೂಟ 125 ವಾರ್ಡ್ ಗಳಲ್ಲಿ,  ಕಾಂಗ್ರೆಸ್ 15 ವಾರ್ಡ್ ಗಳಲ್ಲಿ  ಶಿವಸೇನೆ( ಠಾಕ್ರೆ) ಮೈತ್ರಿಕೂಟ 75  ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಎನ್ ಸಿಪಿ 1 ಹಾಗೂ ಇತರೆ 11 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ.

ಬೆಂಗಳೂರಲ್ಲಿ ಬಿಜೆಪಿ ವಿಜಯೋತ್ಸವ

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್,  ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ್, ಬೆಂಗಳೂರು ಉತ್ತರ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಭಾನು ರಂಗಸ್ವಾಮಿ ಹಲವರು ಉಪಸ್ಥಿತರಿದ್ದರು.

Key words: Mumbai Municipal Corporation, elections, BJP, wins, Celebrations , Bengaluru