ಮೈಸೂರು, ಜನವರಿ,17, 2026 (www.justkannada.in): ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಆತಂಕವನ್ನು ದೂರಾಗಿಸಿ, ಮನೋಸ್ಥೈರ್ಯ ಮತ್ತು ಮಾನಸಿಕ ಪ್ರಶಾಂತತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜನವರಿ 18ರಂದು(ನಾಳೆ) ʻಪರೀಕ್ಷೆ-ನಿಶ್ಚಿಂತೆಯ ಹಾದಿʼ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಮೈಸೂರು ಜಿಲ್ಲಾ ಸಮಿತಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘ, ಕರ್ನಾಟಕ ವಿದ್ಯುತ್ ಮಂಡಳಿ ಲೆಕ್ಕಾಧಿಕಾರಿಗಳ ಸಂಘ, ಕರ್ನಾಟಕ ವಿದ್ಯುತ್ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಿತಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಡಿಪ್ಲೊಮಾ ಇಂಜಿನಿಯರುಗಳ ಸಂಘ ಹಾಗೂ ಎಸ್ಕಾಂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಸಂಘಗಳ ವತಿಯಿಂದ ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಹಾಗೂ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್ ಅವರು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಗರದ ಲಕ್ಷ್ಮಿಪುರಂನಲ್ಲಿರುವ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಂದಿನ ಮಾರ್ಚ್ ಅಥವಾ ಏಪ್ರಿಲ್ 2026ರಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ನುರಿತ ತರಬೇತುದಾರರು ಮನೋಸ್ಥೈರ್ಯ ಹಾಗೂ ಪರೀಕ್ಷಾ ಸಂದರ್ಭದಲ್ಲಿ ಮಾನಸಿಕ ಪ್ರಶಾಂತತೆಯನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸೆಸ್ಕ್‌ನ ಹಿರಿಯ ಅಧಿಕಾರಿಗಳು ಹಾಗೂ ಕವಿಪ್ರನಿನಿ ಹಾಗೂ ಚಾವಿಸನಿನಿಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
Key words: Mysore, SSLC, Exam, Peace , Mind, program







