ಹೈಕಮಾಂಡ್ ಬೀದಿ ದಾಸಯ್ಯನನ್ನ ಸಿಎಂ ಮಾಡಿದ್ರೂ ಒಪ್ಪಿಕೊಳ್ತೇವೆ- ಸಚಿವ ಜಮೀರ್

ಹುಬ್ಬಳ್ಳಿ,ಜನವರಿ,17,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ. ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆಂಬ ವಿಶ್ವಾಸದಲ್ಲಿರುವ ಮುಖಂಡರಿಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದಲ್ಲಿ 2028ರವರೆಗೂ ಸಿಎಂ ಕುರ್ಚಿ ಖಾಲಿ ಇಲ್ಲ. 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ.  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್  ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ರಾಜ್ಯದಲ್ಲಿ ಯಾವ ಕ್ರಾಂತಿಯೂ ಇಲ್ಲ ಭ್ರಾಂತಿಯೂ ಇಲ್ಲ. ಸಿಎಂ ಬದಲಾವಣೆ ವಿಚಾರ ನಮ್ಮ ಕೈಯಲ್ಲಿ ಇಲ್ಲ ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದರೂ ನಾವು ಒಪ್ಪಿಕೊಳ್ಳುತ್ತೇವೆ.  ಬೀದಿದಾಸ್ಯನನ್ನು ಸಿಎಂ ಮಾಡಿದರೂ ನಾವು ಒಪ್ಪಿಕೊಳ್ಳತ್ತೇವೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದರು.

Key words: CM Change, high command, Minister Jameer Ahmad Khan