25 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ

ಬೆಂಗಳೂರು,ಜನವರಿ,17,2026 (www.justkannada.in):  25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಬಕಾರಿ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಗದೀಶ್ ನಾಯ್ಕ್ ಲೋಕಾಯಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ. ಬರೋಬ್ಬರಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಬಕಾರಿ ಡಿಸಿ ಜಗದೀಶ್ ರನ್ನು ಬಂಧಿಸಿದ್ದಾರೆ ಎನ್ನಲಾಗಿದೆ

ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ 25 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯ್ಕ್, ಅಧೀಕ್ಷಕ ತಮ್ಮಣ್ಣ ಹಾಗೂ ಕಾನ್ಸ್ ಟೇಬಲ್ ಲಕ್ಕಪ್ಪ ಎಂಬುವರನ್ನು ಬಂಧಿಸಿದ್ದಾರೆ.

ಉದ್ಯಮಿಯೊಬ್ಬರಿಂದ ಸಿಎಲ್-7 ಹಾಗೂ ಮೈಕ್ರೋ ಬ್ರೇವರಿ ಲೈಸೆನ್ಸ್  ನೀಡಲು 75 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮಧ್ಯೆ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Key words: Excise DC, Lokayukta, trap,  bribe