ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ ಮಹೇಶ್ ಸ್ಪರ್ಧೆ ವಿಚಾರ: ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದ್ದು ಹೀಗೆ

ಮೈಸೂರು,ಜನವರಿ,19,2026 (www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಸಾ.ರಾ ಮಹೇಶ್ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಎಂಬ ಸುದ್ದಿ ಹರಿದಾಡುತ್ತಿದ್ದು ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡ, ನಮ್ಮ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಆತಂಕ ಬೇಡ ವಿಧಾನಸಭೆ ಚುನಾವಣೆಗೆ ಇನ್ನೂ ಎರಡುವರೆ ವರ್ಷ ಇದೆ.  ಚುನಾವಣೆ ಬಂದಾಗ ಬೇರೆ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದರು.

ಜೆಡಿಎಸ್ ನಲ್ಲಿ ಇದ್ದೇನೆ. ಜೆಡಿಎಸ್ ನಿಂದ ಒಂದು ಹೆಜ್ಜೆ ಹೊರ ತೆಗೆದಿಲ್ಲ. ಕೆಲ ವಿಚಾರದಲ್ಲಿ ನೋವಾಗಿದೆ ಅದು  ನಾಯಕರಿಗೆ ಗೊತ್ತಿದೆ. ನನಗೆ ನೋವಾಗಿದೆ ಅಂತಾ ಪಕ್ಷದಿಂದ ಹೊರ ಹೋಗಿಲ್ಲ. ಜೆಡಿಎಸ್ ವಿರುದ್ದವಾಗಿ ನಾನು ಯಾವತ್ತೂ ಮಾತನಾಡಿಲ್ಲ. ಒಳ್ಳೆಯ ಟೈಮ್ ಬರುತ್ತೆ. ಎಲ್ಲವೂ ಒಳ್ಳೆಯದಾಗುತ್ತೆ ಕಾಲ ಕಳೆದಂತೆ ಎಲ್ಲಾ ಮುನಿಸು ನೋವು ಮಾಯವಾಗುತ್ತೆ ಎಂದು ಶಾಸಕ ಜಿ.ಟಿ ದೇವೇಗೌಡ ತಿಳಿಸಿದರು.

Key words: MLA, GT Deve Gowda, Sa.Ra Mahesh, Chamundeshwari constituency