ಬೆಳಗಾವಿ,ಜನವರಿ,19,2026 (www.justkannada.in): ತನ್ನ ಶೌರ್ಯ ಮತ್ತು ಪರಾಕ್ರಮದ ಮೂಲಕ ಬ್ರಿಟಿಷ್ ಸರ್ವಾಧಿಕಾರಿ ಸಾಮ್ರಾಜ್ಯವನ್ನು ಬಹುಕಾಲ ಇನ್ನಿಲ್ಲದಂತೆ ಕಾಡಿದ್ದ ಸಂಗೊಳ್ಳಿ ರಾಯಣ್ಣನ ಬದುಕು ಸರ್ವಕಾಲಕ್ಕೂ ಸ್ಪೂರ್ತಿದಾಯಕ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.
ಕನ್ನಡ ಮಣ್ಣಿನ ವೀರಪುತ್ರ, ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳವಾದ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ವೀರಭೂಮಿಯಲ್ಲಿನ ರಾಯಣ್ಣ ವಸ್ತು ಸಂಗ್ರಹಾಲಯ ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ, ಬಳಿಕ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ತನ್ನ ಶೌರ್ಯ ಮತ್ತು ಪರಾಕ್ರಮದ ಮೂಲಕ ಬ್ರಿಟಿಷ್ ಸರ್ವಾಧಿಕಾರಿ ಸಾಮ್ರಾಜ್ಯವನ್ನು ಬಹುಕಾಲ ಇನ್ನಿಲ್ಲದಂತೆ ಕಾಡಿದ್ದರು. ಅವರ ಬದುಕು ಸರ್ವಕಾಲಕ್ಕೂ ಸ್ಪೂರ್ತಿದಾಯಕ. ರಾಯಣ್ಣನ ಖ್ಯಾತಿ ಮತ್ತು ದೇಶಪ್ರೇಮವನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ನೂತನ ವಸ್ತು ಸಂಗ್ರಹಾಲಯವು ಮಹತ್ವದ ಪಾತ್ರ ವಹಿಸಲಿದೆ ಎಂದರು.
ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಗೂ ಅಪಾರ ಸಂಖ್ಯೆಯಲ್ಲಿ ರಾಯಣ್ಣನ ಅಭಿಮಾನಿಗಳು ಉಪಸ್ಥಿತರಿದ್ದರು.
Key words: Sangolli Rayanna, life, inspiration, all time, CM Siddaramaiah







