ನವದೆಹಲಿ,ಜನವರಿ,20,2026 (www.justkannada.in): ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಇಂದು ಅಧಿಕಾರ ಸ್ವೀಕಾರ ಮಾಡಿದರು.
ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿತಿನ್ ನಬಿನ್ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಹಿಂದಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಅಧಿಕಾರ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೇಂದ್ರ ಸಚಿವರು ಬಿಜೆಪಿ ನಾಯಕರು ಸೇರಿ ಹಲವರು ಉಪಸ್ಥಿತರಿದ್ದರು.
ನಿನ್ನೆ ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇಂದು ಚುನಾವಣಾಧಿಕಾರಿ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದನ್ನ ಘೋಷಣೆ ಮಾಡಿದ್ದರು.
ನಿತಿನ್ ನಬಿನ್ ಆರ್ ಎಸ್ ಎಸ್ ಹಿನ್ನೆಲೆ ಇರುವ ಬಿಹಾರ ಬಿಜೆಪಿ ನಾಯಕ. 2006 ರಲ್ಲಿ ಮೊದಲ ಬಾರಿಗೆ ಪಾಟ್ನಾ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಬಿಹಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಕೆ ಮಾಡಿದ್ದರು.
Key words: Nitin Nabin, charge, BJP national president







