ರಾಮಚಂದ್ರರಾವ್ ಸಸ್ಪೆಂಡ್: ಮುಲಾಜಿಲ್ಲದೆ ಕ್ರಮ- ಗೃಹಸಚಿವ ಪರಮೇಶ್ವರ್

ಬೆಂಗಳೂರು,ಜನವರಿ,20,2026 (www.justkannada.in): ಕಚೇರಿಯಲ್ಲೇ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಮೂಲಕ ಯಾರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಂತಹ ಘಟನೆಯನ್ನ ಪೊಲೀಸ್ ಇಲಾಖೆಗೆ ಮಾತ್ರವಲ್ಲ ಯಾವುದೇ ಇಲಾಖೆ ಕೂಡ ಸಹಿಸುವುದಿಲ್ಲ. ಒಪ್ಪುವುದೂ ಇಲ್ಲ. ಅವರು ಎಷ್ಟೇ ದೊಡ್ಡ ವ್ಯಕ್ತಿ, ಅಧಿಕಾರಿಯಾದರೂ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದೇನೆ. ಇಂತಹ ಕಠಿಣ ಸನ್ನಿವೇಶದಲ್ಲಿ ನಾವು ಕೂಡ ಕಠಿಣವಾಗಿರಬೇಕು. ಹಾಗಾಗಿ ಅವರನ್ನು ಭೇಟಿ ಮಾಡಿಲ್ಲ  ಎಂದು ತಿಳಿಸಿದರು.

ರಾಮಚಂದ್ರರಾವ್ ಬಂಧನಕ್ಕೆ ಬಿಜೆಪಿ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ತಕ್ಷಣಕ್ಕೆ ಅವರನ್ನು ಅಮಾನತುಗೊಳಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ. ತನಿಖೆ ಬಳಿಕ ಏನು ಬೇಕಾದರೂ ಆಗಬಹುದು. ಅವರು ಡಿಸ್ ಮಿಸ್ ಕೂಡ ಆಗಬಹುದು ಎಂದು ಹೇಳಿದರು.

Key words: Ramachandra Rao, suspended, Action, Home Minister, Parameshwar